SDTU ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆಗಸ್ಟ್ 15: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಹಿಮಾನ್ ಬೋಳಿಯಾರ್ ಅವರು ಸಂದೇಶ ಭಾಷಣ ಮಾಡಿದರು. ದೇಶದ ಸ್ವಾತಂತ್ರ್ಯವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ ಮತ್ತು ನ್ಯಾಯವನ್ನು ಖಾತ್ರಿಪಡಿಸುವಂತಿರಬೇಕು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶ್ರಮ ಮಹತ್ವದ್ದಾಗಿದ್ದು, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಗೌರವಯುತ ಬದುಕಿಗಾಗಿ ನಿರಂತರವಾಗಿ ಧ್ವನಿ ಎತ್ತಬೇಕಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗ್ರೆ, ಮಂಗಳೂರು ನಗರ ತಾಲೂಕು ಸಮಿತಿ ಅಧ್ಯಕ್ಷ ಇಕ್ಬಾಲ್ ಬಿಪಿ, ಕಾರ್ಯದರ್ಶಿ ಅನ್ಸಾರ್ ಕುದ್ರೋಳಿ, ಉಪಾಧ್ಯಕ್ಷ ಮುಸ್ತಫಾ ಪರ್ಲಿಯಾ, ಕೋಶಾಧಿಕಾರಿ ಶರೀಫ್ ಕುತ್ತಾರ್, ಬಂದರು ಟೆಂಪೊ ಚಾಲಕರ ಮಾಲಕರ ಸಂಘದ ಸದಸ್ಯ ರಮೀಝ್, ಮಂಗಳೂರಿನ ಉದ್ಯಮಿ ಹಮೀದ್ ಶಾ ಹಾಗೂ ಮಂಗಳೂರು ನಗರ ತಾಲೂಕು ಅಟೋ ಯೂನಿಯನ್ ಸಮಿತಿ ಸದಸ್ಯ ಹಕೀಂ ಕಾನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮವು ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಹಾಗೂ ಕಾರ್ಮಿಕರ ಹಕ್ಕುಗಳ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದೊಂದಿಗೆ ನಡೆಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!