ಮಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳವು: 40ಕ್ಕೂ ಅಧಿಕ ಪ್ರಕರಣಗಳ ಆರೋಪಿ ಬಂಧನ

ದ್ವಿ ಚಕ್ರ ವಾಹನ ಕಳವು ಮಾಡಿದ್ದ ಆರೋಪಿತನನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತ ವ್ಯಕ್ತಿಯನ್ನು ಮಹಮ್ಮದ್ ಫೈಝಲ್ @ ತೋಟ ಫೈಜಲ್ ಎಂದು ಗುರುತಿಸಲಾಗಿದೆ.


ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್ ಎಂಬಲ್ಲಿ ವಾಸದ ಮನೆಯ ಎದುರು ಪಾರ್ಕ್ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಮೊನ್ನೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ತನಿಖೆ ಕೈಗೊಂಡು ದ್ವಿ ಚಕ್ರ ವಾಹನವನ್ನು ಕಳ್ಳತನ ಮಾಡಿದ್ದ ಮಹಮ್ಮದ್ ಫೈಜಲ್ @ ತೋಟ ಫೈಜಲ್ ಎಂಬಾತನನ್ನು ಉರ್ವಾ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸುತ್ತಮುತ್ತಲಿನ ಸಿ.ಸಿ. ಕ್ಯಾಮೆರಾಗಳನ್ನು ಪರಿಶೀಲಿಸಿ, ಆರೋಪಿಯ ಜಾಡು ಪತ್ತೆಹಚ್ಚಿ, ಚಹರೆಯನ್ನು ಗುರುತಿಸಿ, ಬಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ ಆರೋಪಿತ ಹಾಗೂ ಕಳವಾಗಿದ್ದ ದ್ವಿಚಕ್ರ ವಾಹನವನ್ನು ಪತ್ತೆ ಮಾಡಿದ್ದಾರೆ.


ಸದರಿ ಆರೋಪಿತನ ವಿರುದ್ಧ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಅಲ್ಲದೇ, ಆರೋಪಿಯ ವಿರುದ್ಧ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಪ್ರಸ್ತುತ ದಸ್ತಗಿರಿ ವಾರೆಂಟ್ ಇರುವುದು ತಿಳಿದುಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!