ಪುತ್ತೂರು ದರ್ಬೆ ಡಿಜಿಟಲ್ ಸೇವಾ ಕೇಂದ್ರದಲ್ಲಿ ಮಾತಿನ ಚಕಮಕಿ: ಗುಂಪು ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಪುತ್ತೂರು:ಪುತ್ತೂರಿನ ದರ್ಬೆ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ಕೇಂದ್ರದ ಸಿಬ್ಬಂದಿ ಹಾಗೂ ಗ್ರಾಹಕಿ ಓರ್ವರ ನಡುವೆ ಮಾತಿನ ಚಕಮಕಿ ನಡೆದು, ಎರಡೂ ಕಡೆಯವರ ಬೆಂಬಲಿಗರು ಗುಂಪುಗೂಡಿದ್ದು, ಬಳಿಕ ಪೊಲೀಸರಿಂದ ಲಾಠಿಚಾರ್ಜ್ ನಡೆದ ಘಟನೆ ಆ.21ರಂದು ಶುಕ್ರವಾರ ಸಂಜೆ ನಡೆದಿದೆ. ಬಳಿಕ ಇತ್ತಂಡದಿಂದ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ತಿಳಿದುಬಂದಿದೆ.

ಪುತ್ತೂರಿನ ದರ್ಬೆ ಡಿಜಿಟಲ್ ಸೇವಾ ಕೇಂದ್ರದಲ್ಲಿ ಜೆರಾಕ್ಸ್ ಮಾಡಲೆಂದು ಅಂಗಡಿಗೆ ಮಹಿಳೆಯೊಬ್ಬರು ಗ್ರಾಹಕಿಯಾಗಿ ಬಂದಿದ್ದ ವೇಳೆ ಯಾವುದೋ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಸಿಬ್ಬಂದಿ ಹಾಗೂ ದರ್ಬೆ ಡಿಜಿಟಲ್ ಸೇವಾ ಕೇಂದ್ರದ ಮಹಿಳಾ ಮಾಲಕಿ ಮುಸ್ಲಿಂ ಮಹಿಳೆಯ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ವಿಷಯ ತಿಳಿದು ಎರಡೂ ಕಡೆಯವರ ಬೆಂಬಲಿಗರು ಸ್ಥಳದಲ್ಲಿ ಗುಂಪುಗೂಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತೆರಳಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ್ದು, ನಾಲ್ವರನ್ನು ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.ಬಳಿಕ ಇತ್ತಂಡಗಳಿಂದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ತಿಳಿದುಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!