ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶುಕ್ರವಾರ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಶ್ರದ್ಧಾಭಕ್ತಿ ಪೂರ್ವಕವಾಗಿ ನೆರವೇರಿತು.

ಕ್ಷೇತ್ರದಲ್ಲಿ ಬೆಳಗ್ಗೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ, ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದ ವೇದಿಕೆಯಲ್ಲಿ ಕಲಶ ಪ್ರತಿಷ್ಠಾಪನೆ, ಲಲಿತಾ ಸಹಸ್ರನಾಮ ಪಠಣ, ಭಜನೆ, ಶ್ರೀ ವರಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ನೆರವೇರಿತು. ಸಹಸ್ರಾರು ಮಾತೆಯರು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡರು. ಮಾತೆಯರಿಗೆ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಬಾಗಿನ ನೀಡಲಾಯಿತು.ಸುಮಾರು 10 ಸಾವಿರ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಸಾಯಿರಾಮ್ ಎಚ್.ಎಸ್.ಕಿಶೋರ್ ದಂಡೆಕೇರಿ, ಕೃತೀನ್ ಧೀರಜ್ ಅಮೀನ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ಪಿ.ಕೆ.ಗೌರವಿ ರಾಜಶೇಖರ್, ಲತೀಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.



I love how easy it is to navigate this site. Had a great run last night and the bonuses are actually fair. Check out bd499bat if you want some action.