ಸುಮಾರು 08 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಎಲ್ ಪಿ ಸಿ ವಾರೆಂಟ್ ಆರೋಪಿತನ ಬಂಧನ

ಮಂಗಳೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ, ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2006ರಲ್ಲಿ ಮೊ.ನಂ. 166/2006, ಕಲಂ 379 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿತನು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು.

ವಾರಂಟ್ ಜಾರಿಯಲ್ಲಿದ್ದ ಆರೋಪಿತ ಮುವಾಚ್ (45), ಮೊಹಮ್ಮದ್ ಬಾವಾ ಉಸ್ತಾದ್ ಅವರ ಪುತ್ರ, ಹಿಲೇರಿ ನಗರ, ಮುಕ್ಕಚೇರಿ, ಉಳ್ಳಾಲ, ಮಂಗಳೂರು ನಿವಾಸಿಯಾಗಿದ್ದು, ಪ್ರಸ್ತುತ ಕೇರಳ ರಾಜ್ಯದ ಇರಿಕ್ಕೂರು, ಪೆರುವಳತ್ ಪರಂಬು ಎಂಬಲ್ಲಿ ವಾಸವಾಗಿದ್ದ ಎನ್ನಲಾಗಿದೆ.

ಆರೋಪಿಯನ್ನು 2026ರ ಆಗಸ್ಟ್ 28ರಂದು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಮಂಗಳೂರು ಪೂರ್ವ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!