ಆಗಸ್ಟ್ 31ರಂದು ‘ಪುತ್ತೂರು ಚಲೋ’ ಜನಜಾಗೃತಿ ಆಂದೋಲನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಆಗಸ್ಟ್ 31ರಂದು ಪುತ್ತೂರು ಚಲೋ- ಜನಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಚಾರ ಪ್ರಸಾರ ಸಹ ಪ್ರಮುಖ್ ಪ್ರದೀಪ್ ಸರಿಪಲ್ಲ ತಿಳಿಸಿದ್ದಾರೆ.

ಸ್ವಾಭಿಮಾನಿ ಹಿಂದೂ ಸಮಾಜದ ಜಾಗೃತಿಗಾಗಿ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಈ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ಶುಕ್ರವಾರ ನಗರದ ವಿಎಚ್ ಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಯಲ್ಲಿ ಜೆರಾಕ್ಸ್ ಅಂಗಡಿಯ ಮಾಲಕರಾದ ಸದಾಶಿವ ಪೈ, ಅಂಜನಾ ಪೈ ಮತ್ತು ಸುದರ್ಶನ್ ಪೈ ಅವರ ಮೇಲೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿರುವುದು ದುರುದ್ದೇಶದಿಂದ ಕೂಡಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು. ಅಶಾಂತಿಗೆ ಕಾರಣರಾದ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರು ಎಂದು ಹೇಳಲಾಗುತ್ತಿರುವ ನಿಯಾಜ್ ಮತ್ತು ನೌಷಾದ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಸಂಘಟಿತ ಅಪರಾಧ ಪ್ರಕರಣ ಕಾಯ್ದೆಯಡಿ ಕೇಸು ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

SHARE
Loading spinner

One thought on “ಆಗಸ್ಟ್ 31ರಂದು ‘ಪುತ್ತೂರು ಚಲೋ’ ಜನಜಾಗೃತಿ ಆಂದೋಲನ

Leave a Reply

Your email address will not be published. Required fields are marked *

error: Content is protected !!