ಮಂಗಳೂರು: ಮುಂಡಾಲ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಮುಂಡಾಲ ಸಮುದಾಯದ ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮವು ಸೆಪ್ಟೆಂಬರ್ 6ರಂದು ಭಾನುವಾರ ಬೆಳಗ್ಗೆ 11.30ಕ್ಕೆ ನಗರದ ಲಾಲ್‌ಬಾಗ್‌ನ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಕಚೂರು ಶ್ರೀ ಮಾಲ್ತಿದೇವಿ ದೇವಸ್ಥಾನದ ಧರ್ಮದರ್ಶಿ ಹಾಗೂ ಶ್ರೀ ಮಾಲ್ತಿದೇವಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋಕುಲ್‌ದಾಸ್ ಬಾರ್ಕೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಿತ್ರದುರ್ಗದ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಮುಂಡಾಲ ಮಹಾಸಭಾ ದ.ಕ. ಜಿಲ್ಲಾ ಅಧ್ಯಕ್ಷ ಶಿವಪ್ಪ ನಂತೂರು ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾವೇ ವಹಿಸಲಿದ್ದು, ಅಂದು ಬೆಳಗ್ಗೆ ನಂತೂರಿನಲ್ಲಿರುವ ಮುಂಡಾಲ ಮಹಾಸಭಾ ಜಿಲ್ಲಾ ಕಚೇರಿಯನ್ನು ಸಂತೋಷ್ ಕುಮಾರ್ ಉದ್ಘಾಟಿಸಲಿದ್ದಾರೆ ಎಂದರು.

ಮುಂಡಾಲ ಮಹಾಸಭಾದ ಗೌರವಾಧ್ಯಕ್ಷ ಟಿ. ಸದಾಶಿವ ಕುಂದರ್ ಹಾಗೂ ವೆಂಕಟೇಶ್ ಅಶೋಕನಗರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಹರೀಶ್ ಜೆ. ಕೊಲಕಾಡಿ, ಬೆಂಗಳೂರು ಅವರು ಸಂಘಟನೆಯ ಲಾಂಛನವನ್ನು ಅನಾವರಣಗೊಳಿಸಲಿದ್ದಾರೆ ಎಂದು ತಿಳಿಸಿದರು.
ಪ್ರಚಾರ ಸಮಿತಿಯ ಪ್ರಮುಖ ವಿನೋದ್ ಆಳ್ವ ಮಾತನಾಡಿ, ಕಾರ್ಯಕ್ರಮದಲ್ಲಿ ವಿವಿಧ ಮುಂಡಾಲ ಸಂಘಟನೆಗಳ ಪ್ರಮುಖರಾದ ರಘುವೀರ್ ಬಾಬುಗುಡ್ಡ, ಶಿವರಾಜ್ ಮಲ್ಲಾರ್ ಕಾಪು, ವೈ.ಜಿ. ಸುರೇಶ್ ಚಿಕ್ಕಮಗಳೂರು, ಶಂಕರ್ ಪದಕಣ್ಣಾಯ, ವಿಜಯಕುಮಾರ್ ಚಿಕ್ಕಮಗಳೂರು, ಮಂಜುನಾಥ ಶೃಂಗೇರಿ, ಸಂಕೇಶ್ವರ ಮೂಡಿಗೆರೆ, ಮಂಜುನಾಥ ಕರ್ಕೇರ ಪಡುಬಿದ್ರೆ, ಜಯಂತ್ ಕೊಳಂಬೆ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಅಂಗವಾಗಿ ಮುಂಡಾಲ ಸಮುದಾಯದ ವಧು-ವರರ ಅನ್ವೇಷಣಾ ಮಾಹಿತಿ ಶಿಬಿರ ನಡೆಯಲಿದ್ದು, ಮಧ್ಯಾಹ್ನದ ಬಳಿಕ ಸಮುದಾಯದ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸದಾಶಿವ, ಸುರೇಶ್, ಶಶಿಕಾಂತ್, ಜನಾರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Love the variety of games available here. jili90casino always keeps things exciting with their latest updates.