ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ದರ್ಬೆಯ ಜನಸೇವಾ ಕೇಂದ್ರದಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರೊಬ್ಬರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಸುಳ್ಯ ತಾಲೂಕಿನ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ನೀಡಿದ ದೂರಿನ ಆಧಾರದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆ.21ರಂದು ತನ್ನ ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಬಂದಿದ್ದ ವೇಳೆ ಕೆಲವು ದಾಖಲಾತಿಗಳ ಪ್ರಿಂಟ್ ಹಾಗೂ ಲ್ಯಾಮಿನೇಷನ್ಗಾಗಿ ದರ್ಬೆಯ ಡಿಜಿಟಲ್ ಜಿಟಲ್ ಜನಸೇವಾ ಕೇಂದ್ರಕ್ಕೆ ನೀಡಿದ್ದೆ. ಬಳಿಕ ದಾಖಲಾತಿಗಳನ್ನು ಪಡೆಯಲು ತೆರಳಿದಾಗ, ಅವುಗಳ ಪೈಕಿ ಒಂದು ದಾಖಲಾತಿ ಹಾನಿಯಾಗಿರುವುದು ಗಮನಕ್ಕೆ ಬಂದಿತ್ತು. ಅದನ್ನು ಸರಿಪಡಿಸಿಕೊಡಬೇಕು ಅಥವಾ ಹೊಸ ದಾಖಲಾತಿ ಪಡೆಯಲು ಹಣ ನೀಡಬೇಕು ಎಂದು ಕೇಳಿದಾ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶ ಪೈ ಅವಾಚ್ಯವಾಗಿ ನಿಂದಿಸಿದ್ದಲ್ಲೇ ತನಗೆ, ಸಹೋದರ ಹಾಗೂ ತಂಗಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.


ಈ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 352, 115(2), 109 8 3(5)ថ ថថ ದಾಖಲಾಗಿತ್ತು. ಬಳಿಕ ಪೊಲೀಸರು ಸುದರ್ಶನ್ ಪೈಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಂಗ ಬಂಧನದಲ್ಲಿದ್ದ ಸುದರ್ಶನ್ ಪೈಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


The login process is super quick and the games are top notch. Had a great run last night and won big. Highly recommend 178jililogin
This site is honestly a hidden gem. Everything from the registration to the actual gaming is seamless. I really enjoy 988wangame.