ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಅಂತರ್ ಜಿಲ್ಲಾಮಟ್ಟದ ಮಾಸ್ಟರ್ಸ್ ಮತ್ತು ಕಿಡ್ಸ್ ಅಥ್ಲೆಟಿಕ್ ಕ್ರೀಡಾಕೂಟ ಸೆ. 20ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಗೌರವಾಧ್ಯಕ್ಷ ಪ್ರೇಮನಾಥ್ ಶೆಟ್ಟಿ ತಿಳಿಸಿದ್ದಾರೆ.

ಕ್ರೀಡಾಕೂಟ ಬೆಳಿಗ್ಗೆ 6 ಗಂಟೆಗೆ ಆರಂಭವಾಗಲಿದ್ದು, ಬೆಳಿಗ್ಗೆ 9.30ಕ್ಕೆ ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ ಉದ್ಘಾಟಿಸಲಿದ್ದಾರೆ. 30ರಿಂದ 90 ವರ್ಷ ಮೇಲ್ಪಟ್ಟ ವಯೋಮಿತಿಯ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಲು ಅವಕಾಶವಿದೆ.

ಮಾಸ್ಟರ್ಸ್ ಅಥ್ಲೆಟಿಕ್ಸ್ ಜತೆಗೆ 10, 12 ಹಾಗೂ 14 ವರ್ಷದೊಳಗಿನ ಬಾಲಕ-ಬಾಲಕಿಯರಿಗಾಗಿ 400, 200, 100 ಮತ್ತು 60 ಮೀ. ಓಟ, ಲಾಂಗ್ ಜಂಪ್, ಶಾಟ್‌ಪುಟ್ ಹಾಗೂ ಜಾವೆಲಿನ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧಿಗಳು ಶುಲ್ಕ ಪಾವತಿಸಿ ಸೆ. 16ರೊಳಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ವಿಜೇತರಿಗೆ ಪದಕ ಹಾಗೂ ಪ್ರಮಾಣಪತ್ರ ನೀಡಲಾಗುವುದು.

ಓಟದಲ್ಲಿ 100, 200, 400, 800 ಹಾಗೂ 1500 ಮೀ.; ನಡಿಗೆಯಲ್ಲಿ ಪುರುಷರಿಗೆ 500 ಮೀ. ಹಾಗೂ ಮಹಿಳೆಯರಿಗೆ 300 ಮೀ.; ಜಿಗಿತದಲ್ಲಿ ಲಾಂಗ್ ಜಂಪ್, ಟ್ರಿಪಲ್ ಜಂಪ್, ಹೈಜಂಪ್; ಎಸೆತ ವಿಭಾಗದಲ್ಲಿ ಶಾಟ್‌ಪುಟ್, ಜಾವೆಲಿನ್, ಡಿಸ್ಕಸ್ ಹಾಗೂ ಹ್ಯಾಮರ್ ಸ್ಪರ್ಧೆಗಳು ನಡೆಯಲಿವೆ.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ಕೆ. ಜಗದೀಶ ಶೆಟ್ಟಿ, ಉಪಾಧ್ಯಕ್ಷೆ ರೇಖಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಚೇತ ಕೆ., ಕೋಶಾಧಿಕಾರಿ ಚಂದ್ರಹಾಸ ಅಂಚನ್, ಸಂಘಟನಾ ಕಾರ್ಯದರ್ಶಿ ರವಿರಾಜ್ ಪುತ್ತೂರು ಹಾಗೂ ಜಂಟಿ ಕಾರ್ಯದರ್ಶಿ ನಂದಕುಮಾರ್ ಅಂಚನ್ ಉಪಸ್ಥಿತರಿದ್ದರು.



This site has a great vibe and the winning odds feel fair. I had a great run last night and the withdrawal was fast. Give brricowin a try