ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್‌ನಿಂದ ಅ.5ರಂದು ವೈವಿಧ್ಯಮಯ ಕಾರ್ಯಕ್ರಮ……..!

ಮಂಗಳೂರು: ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್‌ (ರಿ) ಮಂಗಳೂರು ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಅಕ್ಟೋಬರ್‌ 5ರಂದು ನಗರದ ಪುರಭವನದಲ್ಲಿ ನಡೆಸಲು ಸಂಘ ತೀರ್ಮಾನಿಸಿದೆ .

ಅಂದು ಬೆಳಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಟ್ರಸ್ಟ್‌ನ ಅಧ್ಯಕ್ಷ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀನಾರಾಯಣ ಎಂ. (ಅಣ್ಣು ಪೂಜಾರಿ) ಘನ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮಾವಂತೂರುಗುತ್ತು ದುರ್ಗಾದಾಸ್ ಶೆಟ್ಟಿ, ಗಡಿಕಾರರು, ಬಲವಾಂಡಿ ಪಿಲ್ಟಂಡಿ ದೈವ ಕ್ಷೇತ್ರ, ಮಾವಂತೂರುಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಟ್ರಸ್ಟ್‌ನ ಸಾಮಾಜಿಕ ಜಾಲತಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸಂಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು ಫಲಾನುಭವಿಗಳಿಗೆ ವಿಮಾ ಯೋಜನೆಯ ಸೌಲಭ್ಯವನ್ನು ಹಸ್ತಾಂತರಿಸಲಿದ್ದಾರೆ. ಸಾಲ್ಯಾನ್ ಕುಟುಂಬ ಕುರ್ಮ್ಮಣ್, ಕಲ್ಲಡ್ಕದ ಯಜಮಾನ ವಿಶ್ವನಾಥ್ ಪೂಜಾರಿ ಅವರು ಸಂಸ್ಥೆಯ ಪದಾಧಿಕಾರಿಗಳಿಗೆ ಗುರುತಿನ ಚೀಟಿಗಳನ್ನು ಹಸ್ತಾಂತರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಖ್ಯಾತ ಉದ್ಯಮಿ ಶಶಿಕಾಂತ್ ಕರ್ಕೇರ,

ಶ್ರೀ ಕ್ಷೇತ್ರ ಪರಾರದ ಬಲವಾಂಡಿ ದೈವದ ಮುಕ್ಕಲ್ಲಿ ಬಾಲಕೃಷ್ಣ ಶೆಟ್ಟಿ ಅಳಿಕೆಗುತ್ತು, ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಲೋಕೇಶ್ ಭಂಡಾರಿ, ಕೂಳೂರಿನ ಮಲರಾಯ ಸ್ಥಾನ ಉದ್ಯಮಿ ಉಮೇಶ್, ಉರ್ವ ಶ್ರೀ ರಾಮ ಮಂದಿರ ಹಾಗೂ ಕೊರಗಜ್ಜ ಕ್ಷೇತ್ರದ ಗುರಿಕಾರ ರಾಜೇಶ್, ಗ್ಲಿಟ್ಸ್ ಎಂಟರ್‌ಟೈನ್‌ಮೆಂಟ್‌ ಆ್ಯಂಡ್‌ ಹಾಸ್ಪಿಟಾಲಿಟಿಯ ಮಾಲಕ ತುಷಾರ್ ಸುರೇಶ್ ಸುರತ್ಕಲ್ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತುಳು ಹಾಸ್ಯಮಯ ಸಾಮಾಜಿಕ ನಾಟಕ ಪ್ರದರ್ಶನ

ಸಭಾ ಕಾರ್ಯಕ್ರಮದ ಬಳಿಕ ಬೆಳಗ್ಗೆ 11.30ಕ್ಕೆ ‘ಚಾ ಪರ್ಕ ಕಲಾವಿದೆರ್’ ತಂಡದಿಂದ ಲಯನ್ಸ್ ದೇವದಾಸ್ ಕಾಪಿಕಾಡ್ ನಿರ್ದೇಶನದ ‘ಏರ್ಲ ಗ್ಯಾರಂಟಿ ಅತ್ತ್’ ಎಂಬ ತುಳು ಹಾಸ್ಯಮಯ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ.ಇದೇ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಅ.8ರಂದು ವಿಮಾ ಯೋಜನೆ, ಆರೋಗ್ಯ ತಪಾಸಣಾ ಶಿಬಿರ

ವಿಶೇಷ ಕಾರ್ಯಕ್ರಮವಾಗಿ ಅಕ್ಟೋಬರ್ 8ರಂದು ಕಾವೂರು ಸೊಸೈಟಿ ಹಾಲ್‌ನಲ್ಲಿ ಟ್ರಸ್ಟ್‌ನ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳಿಗಾಗಿ ವಿಮಾ ಯೋಜನೆಗೆ ಸಂಬಂಧಿಸಿದ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!