ಮಂಗಳೂರು:ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಹಬ್ಬಗಳಿಗೆ ರಜೆ ನೀಡುವ ವಿಚಾರವನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಕೃಷ್ಣಾಷ್ಟಮಿ ಹಾಗೂ ಕನ್ಯಾಮೇರಿ ಹುಟ್ಟುಹಬ್ಬದಂದು ರಜೆ ನೀಡಬೇಕು ಎಂಬ ಬೇಡಿಕೆಗಳು ಬಂದಿವೆ. ಈ ಕುರಿತು ಸಂಬಂಧಿತ ಇಲಾಖೆಯು ಚರ್ಚೆ ನಡೆಸಿ ಪರಿಶೀಲನೆ ಮಾಡಲಿದೆ ಎಂದು ಹೇಳಿದರು.

ಹಬ್ಬಗಳ ಸಂದರ್ಭದಲ್ಲಿ ರಜೆ ನೀಡುವ ಕುರಿತ ಬೇಡಿಕೆಯನ್ನು ತಾವು ಕೂಡ ಸರ್ಕಾರದ ಗಮನಕ್ಕೆ ತಂದಿರುವುದಾಗಿ ಯು.ಟಿ. ಖಾದರ್ ತಿಳಿಸಿದರು.
ಈ ಬಗ್ಗೆ ಸರ್ಕಾರವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು.

