ಪೆರ್ನೆ ಸಮೀಪ ಮಹಿಳೆ ಅನುಮಾನಾಸ್ಪದ ಸಾವು; ಆತ್ಮಹತ್ಯೆಯೇ, ಕೊಲೆಯೇ ಎಂಬ ಶಂಕೆ

ಮಂಗಳೂರು /ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಇದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ.ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ.

ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದು ಇತ್ತೀಚೆಗೆ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು.ಅವರು ಇನ್ನೋರ್ವ ಗಂಡು ಮಗ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.’

SHARE
Loading spinner

Leave a Reply

Your email address will not be published. Required fields are marked *

error: Content is protected !!