ಮಂಗಳೂರು–ಉಡುಪಿ ಜಿಲ್ಲೆಗಳ 3ನೇ ಹಂತದ ಸಹಿ ಸಂಗ್ರಹ ಅಭಿಯಾನ ಉದ್ಘಾಟನೆ
ಮಂಗಳೂರು:* ಗೋಮಾತೆಯ ರಕ್ಷಣೆ ಮತ್ತು ಸೇವೆಯ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ‘ಗೋ ಸಮ್ಮಾನ್ ಆಹ್ವಾನ ಅಭಿಯಾನ’ದ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ 3ನೇ ಹಂತದ ಸಹಿ ಸಂಗ್ರಹ ಅಭಿಯಾನಕ್ಕೆ ಸೆಪ್ಟೆಂಬರ್ 6ರಂದು ಚಾಲನೆ ದೊರೆಯಲಿದೆ.

ಭಾನುವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1ರವರೆಗೆ ಕದ್ರಿಯ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದಲ್ಲಿ ಕಾರ್ಯಕ್ರಮ ನಡೆಯಲಿದೆ.

ಪೂಜ್ಯ ಸಂತರ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುಷ್ಕರ್ ಶೀತಲ್ ಆಶ್ರಮದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗೋಪಾಲನಂದ ಸರಸ್ವತಿ ಜೀ ಮಹಾರಾಜ್, ರಾಜಸ್ಥಾನದ ಪಥಮೇಡ ಗೋ ಧಾಮದ ಪರಮಪೂಜ್ಯ ಥಾನಾಪತಿ ಶ್ರೀ ಶ್ರೀ ರವೀಂದ್ರಾನಂದ ಸರಸ್ವತಿ ಜೀ ಮಹಾರಾಜ್, ಕದ್ರಿ ಶ್ರೀ ಯೋಗೇಶ್ವರ ಮಠದ ಪರಮಪೂಜ್ಯ 1008 ಶ್ರೀ ಶ್ರೀ ನಿರ್ಮಲನಾಥ್ ಜೀ ಮಹಾರಾಜ್, ಜಗದ್ಗುರು ಶ್ರೀ ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರಿನ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳು, ಶ್ರೀ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರ ನಂದ ಸ್ವಾಮೀಜಿ, ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ, ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮದ ಪರಮಪೂಜ್ಯ ಯೋಗಿಕೌಸ್ತುಭ ಕರ್ಮಯೋಗಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಓಂಕಾರ ಮಠ ಚಿಕ್ಕಬಳ್ಳಾಪುರದ ಪರಮಪೂಜ್ಯ ಶ್ರೀ ಶ್ರೀ ಕಾಳಿಕಾ ತನಯ ಉಮಾಮಹೇಶ್ವರ ಸ್ವಾಮೀಜಿ, ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪೂಜ್ಯ ಶ್ರೀ ಕೃಷ್ಣ ಗುರೂಜಿ, ಏಕಜಾತಿ ಧರ್ಮಪೀಠದ ಪೀಠಾಧೀಶ್ವರರು ಹಾಗೂ ಶ್ರೀ ದ್ವಾರಕಾಮಾಯಿ ಮಠ ಶಂಕರಪುರದ ಪೂಜ್ಯ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಮತ್ತು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಸಾಧ್ವಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿರುವರು.

ಗೋಮಾತೆಯ ರಕ್ಷಣೆ ಹಾಗೂ ಸೇವೆಯ ಕುರಿತು ಜನಜಾಗೃತಿ ಮೂಡಿಸುವ ಈ ವಿಶೇಷ ಅಭಿಯಾನದಲ್ಲಿ ಗೋಭಕ್ತರು, ಕಾರ್ಯಕರ್ತರು, ಧಾರ್ಮಿಕ ಮುಖಂಡರು, ಸಕಲ ಸಮಾಜದ ಬಂಧುಗಳು ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಹಿ ಸಂಗ್ರಹ ಅಭಿಯಾನದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


The app installation was a breeze and it runs perfectly on my Android device. No more lagging during live bets. Get the official version at 1xbetphdownload.
Really impressed with the bonus offers for new members. It gave me a great head start. I’m really enjoying my experience with idcaricuan so far.