ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಸಚಿವ ಸಂಪುಟ ಸಭೆ ನಡೆಸಲು ಅಗತ್ಯವಿರುವ ಸ್ಥಳಾವಕಾಶ, ಪಾರ್ಕಿಂಗ್ ವ್ಯವಸ್ಥೆ, ಭದ್ರತಾ ಕ್ರಮಗಳು ಹಾಗೂ ಸಂಚಾರ ನಿಯಂತ್ರಣ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಸಚಿವರು ಪರಿಶೀಲನೆ ನಡೆಸಿದರು.ಸಭೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಅಗತ್ಯ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಎಡಿಸಿ ರಾಜು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.




Really appreciate the variety of games available here. There is something for everyone. I’ll be sticking with sinar777login for a long time.