ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್

ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ.2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು ನಮೂದಾಗಿರುವುದು ನೋಟಿಸ್‌ಗೆ ಕಾರಣ ಎನ್ನಲಾಗಿದೆ. ಆದರೆ, ಅವರ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲಾ ದಾಖಲೆಗಳಲ್ಲಿ ‘ಹರೇಕಳ ಹಾಜಬ್ಬ’ ಎಂದೇ ಹೆಸರು ನಮೂದಾಗಿದೆ.

ಎಸ್‌ಐಆರ್ ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಲ್ಲಿರುವ ಹೆಸರು ಹಾಗೂ ಇತರ ದಾಖಲೆಗಳಲ್ಲಿನ ಹೆಸರು ತಾಳೆಯಾಗದ ಹಿನ್ನೆಲೆಯಲ್ಲಿ ಸಹಜ ಪ್ರಕ್ರಿಯೆಯಂತೆ ನೋಟಿಸ್ ಜಾರಿಯಾಗಿದೆ.ಇಂದು ಅಂಗನವಾಡಿ ಕಾರ್ಯಕರ್ತೆಯೊಬ್ಬರು ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ್ದಾರೆ. ಸೆಪ್ಟೆಂಬರ್ 11ರಂದು ಶುಕ್ರವಾರ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್‌ಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ

SHARE
Loading spinner

One thought on “ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್

Leave a Reply

Your email address will not be published. Required fields are marked *

error: Content is protected !!