ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರು ಆರೋಪಿಗಳ ಬಂಧನ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಜವಾದ್, ಶಾಹಿದ್, ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಸೇರಿದಂತೆ ಆರು ಮಂದಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಂತ್ರಸ್ತ ಬಾಲಕ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಅಪರಾಧ ಕ್ರಮಾಂಕ 185/2026ರಿಂದ 190/2026ರವರೆಗೆ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಪೋಕ್ಸೋ ಕಾಯ್ದೆ 2012ರ ವಿವಿಧ ಕಲಂಗಳಡಿ ತನಿಖೆ ಕೈಗೊಳ್ಳಲಾಗಿದೆ.

ತನಿಖೆ ಮುಂದುವರಿಸಿದ ಪೊಲೀಸರು ಆರೋಪಿಗಳ ಪೈಕಿ ಜವಾದ್, ಶಾಹಿದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಎಂಬ ಮೂವರನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮೂವರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಕರಣದ ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!