ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ ಹಾಗೂ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಸೆ.14ರಿಂದ 16ರವರೆಗೆ ನಗರದ ಬಂಟ್ಸ್ ಹಾಸ್ಟೇಲ್‌ನ ‘ಓಂಕಾರ ನಗರ’ದಲ್ಲಿ ನಡೆಯಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.
ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿದರು.

ಸೆ.13ರಂದು ಸಂಜೆ 5 ಗಂಟೆಗೆ ಶರವು ದೇವಸ್ಥಾನದ ಬಳಿಯ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದ್ದು, ಶ್ರೀ ರಾಮದಾಸ್ ಆಚಾರ್ಯರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ‘ಓಂಕಾರ ನಗರ’ಕ್ಕೆ ಬರಮಾಡಿಕೊಳ್ಳಲಾಗುವುದು.
ಸೆ.14ರಂದು ಬೆಳಗ್ಗೆ 8 ಗಂಟೆಗೆ ಸ್ಥಳಶುದ್ಧಿ ಹಾಗೂ ಮೂರ್ತಿ ಪ್ರತಿಷ್ಠೆ, 9 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಉದ್ಘಾಟನೆ ಮತ್ತು ತೆನೆ ವಿತರಣೆ ನಡೆಯಲಿದೆ. ಸಂಜೆ 3 ಗಂಟೆಯಿಂದ ಪಾಂಚಜನ್ಯ ಪ್ರತಿಷ್ಠಾನ ಕುಡ್ಲದ ಕಲಾವಿದರಿಂದ ‘ಶ್ರೀ ಮಂಗಳಪುರದ ಮಂಗಳಾಂಬಿಕೆ’ ಪೌರಾಣಿಕ ನೃತ್ಯನಾಟಕ ಪ್ರದರ್ಶನಗೊಳ್ಳಲಿದೆ.
ಸಂಜೆ 5ರಿಂದ 7ರವರೆಗೆ ಧಾರ್ಮಿಕ ಸಭೆ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ರಾತ್ರಿ 7.30ರಿಂದ ರಂಗಪೂಜೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ರಿಂದ ‘ಬಂಟಕಲಾ ಸಂಗಮ–2026’ ಹೆಸರಿನಲ್ಲಿ ವಿವಿಧ ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.

ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ. ಆಶಾಜ್ಯೋತಿ ರೈ ಬಂಬ್ರಾಣ ಮಾತನಾಡಿ, ಸೆ.15ರಂದು ಬೆಳಗ್ಗೆ 11.30ರಿಂದ ಮೂಡಪ್ಪ ಸೇವೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 4ರಿಂದ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗದ ಅಂಗವಾಗಿ ಋತ್ವಿಜರಿಂದ ಯಾಗಶಾಲಾ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಭೂಶುದ್ಧಿ, ವಾಸ್ತು ರಾಕ್ಕೊ ಹವನ, ಮಹಾಪೀಠದಲ್ಲಿ ಕಲಶ ಸ್ಥಾಪನೆ ಹಾಗೂ ಮಹಾಗಣಯಾಗದ ಸೇವಾರ್ಥಿಗಳಿಂದ ಸಂಕಲ್ಪ ನಡೆಯಲಿದೆ ಎಂದು ತಿಳಿಸಿದರು.
ಸಂಜೆ 5ರಿಂದ 7ರವರೆಗೆ ಧಾರ್ಮಿಕ ಸಭೆ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ರಾತ್ರಿ 7.30ರಿಂದ ಹೂವಿನ ಪೂಜೆ, ರಂಗಪೂಜೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ರಿಂದ ಸ್ವರಲಯ ಸಿಂಪೋನಿ ಕಲಾಶಾಲೆಯ ವತಿಯಿಂದ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಸೆ.16ರಂದು ಬೆಳಗ್ಗೆ 8.30ರಿಂದ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ಯಾಗದ ಪೂರ್ಣಾಹುತಿ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಸಂಜೆ 3.30ಕ್ಕೆ ‘ಓಂಕಾರ ನಗರ’ದಲ್ಲಿ ವಿಸರ್ಜನ ಪೂರ್ವ ಪೂಜೆ ನೆರವೇರಿಸಿ, ಗಣ್ಯರ ಉಪಸ್ಥಿತಿಯಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಲಾಗುವುದು. ಶೋಭಾಯಾತ್ರೆಯು ಬಂಟ್ಸ್ ಹಾಸ್ಟೇಲ್ ಸರ್ಕಲ್, ಪಿ.ವಿ.ಎಸ್. ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ ಹಾಗೂ ವೆಂಕಟರಮಣ ದೇವಸ್ಥಾನದ ರಸ್ತೆಯ ಮೂಲಕ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಗ್ರಹ ವಿಸರ್ಜನೆಗೊಳ್ಳಲಿದೆ.

ಗಣೇಶೋತ್ಸವದ ಮೂರು ದಿನಗಳಲ್ಲೂ ವೇದಿಕೆಯಲ್ಲಿ ಜಿಲ್ಲೆಯ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಉಪಾಧ್ಯಕ್ಷ *ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ **ಎಂ. ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ **ಪದ್ಮನಾಭ ಶೆಟ್ಟಿ ಪುಂಚಮೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ **ಜಯಶೀಲ ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ *ಸದಾಶಿವ ಶೆಟ್ಟಿ ಬಿಜೈ ಹಾಗೂ ಪ್ರಮುಖರಾದ ರಾಮ್ ಮೋಹನ್ ರೈ ಉಪಸ್ಥಿತರಿದ್ದರು.


The variety of games here is insane. I spent the whole weekend exploring different slots and had a blast. 366betcassinoonline is my new favorite haunt.
The variety of games here is insane. I never run out of things to try and the customer support is always helpful. br345ok is my go-to spot now.