ಮೂಡ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸುರತ್ಕಲ್–ಚೇಳಾರು ನಿವೇಶನಗಳ ಪರಿಶೀಲನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಅವರು, ಸುರತ್ಕಲ್–ಚೇಳಾರು ವ್ಯಾಪ್ತಿಯ ಮೂಡ ನಿವೇಶನಗಳ ಪ್ರಸ್ತುತ ಸ್ಥಿತಿಗತಿ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರಿಗೆ ನಿವೇಶನ ಹಂಚಿಕೆ/ಬಳಕೆಗೆ ಸಂಬಂಧಿಸಿದ ವಿಚಾರಗಳನ್ನು ಪರಿಶೀಲಿಸುವ ಉದ್ದೇಶದಿಂದ ಮೂಡ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ಥಳ ವೀಕ್ಷಣೆ ನಡೆಸಿದರು.


ಈ ಸಂದರ್ಭದಲ್ಲಿ ನಿವೇಶನಗಳ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

SHARE
Loading spinner

Leave a Reply

Your email address will not be published. Required fields are marked *

error: Content is protected !!