ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನಿಟ್ಟೆಯ ಡಾ. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದೆ.ಈ ಮೂಲಕ ಬಾಲಕಿಯರ ತಂಡವು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಇದೇ ಪಂದ್ಯಾಟದಲ್ಲಿ ಶಾಲೆಯ ಬಾಲಕರ ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ವಿಜೇತ ತಂಡದ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.


