ಪುತ್ತೂರು: ಆಟೋ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ – ವಿಮೆನ್ ಇಂಡಿಯಾ ಮೂವ್‌ಮೆಂಟ್ ತೀವ್ರ ಖಂಡನೆ

ಪುತ್ತೂರು: ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದ ಮಹಿಳೆಯೊಬ್ಬರಿಗೆ ಆಟೋ ಚಾಲಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆಯನ್ನು ‘ವಿಮೆನ್ ಇಂಡಿಯಾ ಮೂವ್‌ಮೆಂಟ್’ (WIM) ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ ಅವರು ಆಘಾತ ವ್ಯಕ್ತಪಡಿಸಿದ್ದು, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9ರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ನಿವಾಸಿಯಾದ ಮಹಿಳೆಯೊಬ್ಬರು ಕೆಲಸದ ನಿಮಿತ್ತ ಮನೆಯಿಂದ ಹೊರಟು ಪರಿಚಯದ ಆಟೋ ರಿಕ್ಷಾದಲ್ಲಿ ಪುತ್ತೂರಿಗೆ ತೆರಳುತ್ತಿದ್ದ ವೇಳೆ, ಆಟೋ ಚಾಲಕ ಮಾರ್ಗ ಬದಲಿಸಿ ರಿಕ್ಷಾವನ್ನು ‘ಕುರಿಯ’ ಎಂಬಲ್ಲಿಗೆ ಕೊಂಡೊಯ್ದು ನಿಲ್ಲಿಸಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ

.
ಮಹಿಳೆಯರು ತಮ್ಮ ದೈನಂದಿನ ಕೆಲಸ ಹಾಗೂ ಉದ್ಯೋಗಕ್ಕಾಗಿ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸುತ್ತಿದ್ದು, ಅಂತಹ ಸಂದರ್ಭದಲ್ಲಿ ಅವರ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಹೊರತರುವಂತೆ ಅವರು ಆಗ್ರಹಿಸಿದ್ದಾರೆ. ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸಂದರ್ಭದಲ್ಲಿ, ಇಂತಹ ಸೂಕ್ಷ್ಮ ಪ್ರಕರಣಗಳಿಗೆ ರಾಜಕೀಯ ಬಣ್ಣ ನೀಡದೆ, ಮಹಿಳೆಯ ಘನತೆ ಮತ್ತು ಸುರಕ್ಷತೆಯನ್ನು ಕೇಂದ್ರವಾಗಿಟ್ಟುಕೊಂಡು ಜವಾಬ್ದಾರಿಯುತವಾಗಿ ವಿಚಾರವನ್ನು ನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.


ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಚಾರದಲ್ಲಿ ಯಾವುದೇ ರಾಜಿ ಇರಬಾರದು. ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗೆ ಸಂಪೂರ್ಣ ಸುರಕ್ಷಿತ ವಾತಾವರಣ ಕಲ್ಪಿಸುವುದು ಪೊಲೀಸ್ ಇಲಾಖೆ ಹಾಗೂ ಸಮಾಜದ ಎಲ್ಲರ ಜವಾಬ್ದಾರಿಯಾಗಿದೆ. ಈ ಪ್ರಕರಣದಲ್ಲಿ ಸತ್ಯಾಸತ್ಯತೆ ಶೀಘ್ರವಾಗಿ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಮುಂದೆ ಸೂಕ್ತ ಕ್ರಮಕ್ಕೆ ಒಳಪಡಬೇಕು ಎಂದು ಅವರು ಬಲವಾಗಿ ಒತ್ತಾಯಿಸಿದ್ದಾರೆ.

SHARE
Loading spinner

2 thoughts on “ಪುತ್ತೂರು: ಆಟೋ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ – ವಿಮೆನ್ ಇಂಡಿಯಾ ಮೂವ್‌ಮೆಂಟ್ ತೀವ್ರ ಖಂಡನೆ

  1. Best platform for those who love fast paced action. Everything from registration to playing is very intuitive. I’m really enjoying my time at pkwc888 right now.

    Loading spinner

Leave a Reply

Your email address will not be published. Required fields are marked *

error: Content is protected !!