ಮಂಗಳೂರು, ಸೆ.10: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಪಂಜ, ಉಳ್ಳಾಲ ತಾಲೂಕಿನ ತಲಪಾಡಿ, ಕೊಣಾಜೆ ಹಾಗೂ ಬಾಳೆಪುಣಿ, ಮಂಗಳೂರು ತಾಲೂಕಿನ ಬಾಳ ಮತ್ತು ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ನಡೆಸಿವೆ.

ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು, ಕಾರವಾರ ಹಾಗೂ ಉಡುಪಿ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆದಿದೆ.

ಪರಿಶೀಲನೆಯ ವೇಳೆ ಕಚೇರಿಗಳಲ್ಲಿ ಕಂಡುಬಂದ ಲೋಪದೋಷಗಳ ಕುರಿತು ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.


Finally found a place that doesn’t lag during the big moments. The betting options are extensive and the odds are quite competitive. krbettwiner is legit.