ಮಾದಕವಸ್ತು ಬಳಕೆ ವಿರುದ್ಧ ಪೊಲೀಸ್ ಅಭಿಯಾನ

ಮಾದಕ ವಸ್ತುಗಳ ಬಳಕೆಯ ವಿರುದ್ಧ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ತಪಾಸಣಾ ಅಭಿಯಾನದ ಭಾಗವಾಗಿ ಈ ವರ್ಷ 150 ಕಾಲೇಜುಗಳ 8,310 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 98 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿತ್ತು. ಆ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ಮೂಲಕ ಕೌನ್ಸೆಲಿಂಗ್ ಮಾಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


ಮೊದಲ ಹಂತದ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ವಿದ್ಯಾರ್ಥಿಗಳ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಸಮಾಲೋಚನೆಯ ಬಳಿಕ ಅವರ ಸ್ಥಿತಿಗತಿಯ ಬಗ್ಗೆ ದೃಢಪಡಿಸಲು ಗುರುವಾರ ಮರುಪರೀಕ್ಷಾ ಅಭಿಯಾನ ನಡೆಸಲಾಯಿತು. ಈ ವೇಳೆ ಮೊದಲ ಹಂತದಲ್ಲಿ ಪಾಸಿಟಿವ್ ವರದಿ ಬಂದಿದ್ದ 50 ವಿದ್ಯಾರ್ಥಿಗಳನ್ನು ಮರುಪರೀಕ್ಷೆಗೆ ಒಳಪಡಿಸಲಾಯಿತು. ಈ ಮರುಪರೀಕ್ಷೆಯಲ್ಲಿ 38 ವಿದ್ಯಾರ್ಥಿಗಳ ಫಲಿತಾಂಶ ನೆಗೆಟಿವ್ ಬಂದಿದೆ. ತಾವು ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿರುವುದಾಗಿ ಈ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಪಾಸಿಟಿವ್ ಬಂದವರಲ್ಲಿ ಶೇ.75ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ನೆಗೆಟಿವ್ ಆಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಪೊಲೀಸ್ ಆಯುಕ್ತರು ಅಭಿಪ್ರಾಯಪಟ್ಟಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!