ಮಂಗಳೂರು: ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ಕ್ಯಾಂಪ್ಕೋ ಸಂಸ್ಥೆಯ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ವಿಶೇಷ ಸಹಿ ಸಂಗ್ರಹ ಅಭಿಯಾನ ನಡೆಯಿತು.

ಅಭಿಯಾನದಲ್ಲಿ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಶ್ರೀಮತಿ ಕಮಲಾ ಪ್ರಭಾಕರ್ ಭಟ್, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ ಚಂದ್ರ ಸೇರಿದಂತೆ ಸುಮಾರು 2,500ಕ್ಕೂ ಅಧಿಕ ಗೋಭಕ್ತರು ಹಾಗೂ ಕೃಷಿಕರು ಭಾಗವಹಿಸಿ ಸಹಿ ಹಾಕುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಆಗ್ರಹಿಸಿ ನಡೆದ ಈ ಸಹಿ ಅಭಿಯಾನಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಯಿತು.







