​ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ: ‘ಗೋಸಮ್ಮಾನ್’ ಸಹಿ ಸಂಗ್ರಹ ಅಭಿಯಾನಕ್ಕೆ ಅಧಿಕೃತ ಚಾಲನೆ

​ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಮಂಗಳೂರಿನ ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು.


ಇದೇ ಸಂದರ್ಭದಲ್ಲಿ ‘ಗೋಸಮ್ಮಾನ್ ಅಭಿಯಾನ’ದ ದಕ್ಷಿಣ ಕನ್ನಡ ಜಿಲ್ಲಾ ಸಹ-ಪ್ರಭಾರಿ ಅಶೋಕ್ ಇಳಂತಿಲ ಅವರು ಮಾತನಾಡಿ, ಗೋವಿಗೆ ರಾಷ್ಟ್ರೀಯ ಸ್ಥಾನಮಾನ ದೊರೆಯಬೇಕು, ದೇಶದಲ್ಲಿ ಸಂಪೂರ್ಣ ಗೋಹತ್ಯೆ ನಿಲ್ಲಬೇಕು, ದೇಸೀ ತಳಿಗಳ ಸಂರಕ್ಷಣೆಗಾಗಿ ಪ್ರತ್ಯೇಕ ‘ಗೋಸೇವಾ ಸಚಿವಾಲಯ’ ಸ್ಥಾಪನೆಯಾಗಬೇಕು ಹಾಗೂ ಕಟ್ಟುನಿಟ್ಟಿನ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬರಬೇಕೆಂದು ಕರೆ ನೀಡಿದರು. ಈ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ‘ಗೋಸಮ್ಮಾನ್ ಅಭಿಯಾನ’ದ ಸಹಿ ಸಂಗ್ರಹಕ್ಕೆ ಕೈಜೋಡಿಸುವಂತೆ ಅವರು ಮನವಿ ಮಾಡಿದರು.


​ನಂತರ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಮನವಿ ಪತ್ರಕ್ಕೆ ಸಹಿ ಹಾಕುವ ಮೂಲಕ ಜಿಲ್ಲೆಯಲ್ಲಿ ‘ಗೋಸಮ್ಮಾನ್’ ಸಹಿ ಸಂಗ್ರಹ ಅಭಿಯಾನಕ್ಕೆ ಪಕ್ಷದ ವತಿಯಿಂದ ಚಾಲನೆ ನೀಡಿದರು.
​ಸಭೆಯಲ್ಲಿ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಮಂಡಲಗಳ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!