ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ: ಡಿ.ಕೆ. ಶಿವಕುಮಾರ್

ಮಂಗಳೂರು: ತುಳುನಾಡಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸೆ.18ರಂದು ಮಂಗಳೂರಿಗೆ ಆಗಮಿಸುತ್ತಿದ್ದು, ತುಳುನಾಡಿನಲ್ಲಿ ವಿಶೇಷವಾದ ಸಚಿವ ಸಂಪುಟ ಸಭೆ ನಡೆಸಲಾಗುವುದು. ಈ ಸಂದರ್ಭದಲ್ಲಿ ಜಿಲ್ಲೆಯ ಜನರನ್ನು ಭೇಟಿ ಮಾಡಿ, ಅವರ ಸಮಸ್ಯೆಗಳು ಹಾಗೂ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಾಗುವುದು ಎಂದರು.

ಜನರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಚಿಂತನೆ ನಡೆಸುತ್ತಿದೆ. ತುಳುನಾಡಿನ ಅಭಿವೃದ್ಧಿಗೆ ಅಗತ್ಯವಿರುವ ಕ್ರಮಗಳ ಕುರಿತು ಸಭೆಯಲ್ಲಿ ಗಮನಹರಿಸಲಾಗುವುದು ಎಂದು ಅವರು ಹೇಳಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!