ಮಂಗಳೂರು: ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ‘ತುಳು ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು. ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತುಳು ಪರಿಷತ್ ಮಂಗಳೂರು ಅಧ್ಯಕ್ಷ ಕೆ. ಶುಭೋದಯ ಆಳ್ವ ಆಗ್ರಹಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ತುಳು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಳೆದ ಏಳು ವರ್ಷಗಳಿಂದ ನಿರಂತರವಾಗಿ ಹೋರಾಟ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರತಿವರ್ಷ ತುಳು ವಿದ್ಯಾರ್ಥಿ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಈವರೆಗೆ ಮೂರು ಸಮ್ಮೇಳನಗಳನ್ನು ನಡೆಸಲಾಗಿದೆ ಎಂದರು.
ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ರಚಿಸಬೇಕು ಎಂಬುದು ತುಳು ಪರಿಷತ್ನ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.

ತುಳು ಸಾಹಿತ್ಯ ಅಕಾಡೆಮಿಗೆ ಅಗತ್ಯ ಪ್ರಮಾಣದ ಸಂಪನ್ಮೂಲಗಳ ಕೊರತೆಯಿದೆ. ತುಳು ಅಭಿವೃದ್ಧಿ ನಿಗಮ ಸ್ಥಾಪನೆಯಾದರೆ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ತುಳು ನಾಡಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮತ್ತು ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ತುಳು ಪರಿಷತ್ ಮಂಗಳೂರು ಇದರ ಸದಸ್ಯರಾದ ಬೆನೆಟ್ ಅಮ್ಮಣ್ಣ, ಸುಮತಿ, ಅಮಿತಾ ಅಶ್ವಿನ್, ಡಾ. ಪ್ರಭಾಕರ್ ನೀರುಮಾರ್ಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Perfect for sports fans. The live updates are spot on and the betting options are endless. I always use nbajjelogin for my weekly picks.