ಮಂಗಳೂರು, ಸೆ. 18: ಕರ್ನಾಟಕದಲ್ಲಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಹಲವು ದಶಕಗಳಿಂದ ಕೇಳಿಬರುತ್ತಿತ್ತು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳು ಭಾಷೆಗೆ ವಿಶೇಷ ಮಾನ್ಯತೆ ನೀಡುವಂತೆ ಹಲವು ಹೋರಾಟಗಳು ನಡೆದಿದ್ದವು. ಇದೀಗ ರಾಜ್ಯ ಸರ್ಕಾರ ತುಳುವನ್ನು ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸಲು ನಿರ್ಧರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
“ಹಿಂದಿನವರು ಯಾಕೆ ಮಾಡಲಿಲ್ಲ, ಏನಾಯಿತು ಎಂದು ನಾವು ಕೇಳುವುದಿಲ್ಲ. ನಾವು ಬದುಕಿನ ಮೇಲೆ ರಾಜಕಾರಣ ಮಾಡಬೇಕು, ಭಾವನೆಗಳ ಮೇಲೆ ಅಲ್ಲ,” ಎಂದು ಅವರು ಹೇಳಿದರು.
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆಯೂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಈ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಜನಾಭಿಪ್ರಾಯ
ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಬದಲಾಯಿಸಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಈ ವಿಚಾರದಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಚರ್ಚೆಗಳು ಮತ್ತು ವಿವಿಧ ರೀತಿಯ ಬೇಡಿಕೆಗಳು ವ್ಯಕ್ತವಾಗುತ್ತಿದ್ದು, ಜನಾಭಿಪ್ರಾಯಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.


I have tried a few sites lately but this one feels the most reliable. Great game variety and no lag at all. Highly recommend idmustang77 to everyone.