ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಸಂತಸ ವ್ಯಕ್ತಪಡಿಸಿದ ಲೋಕೇಶ್ ಕುಲಾಲ್

ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಅಂಗೀಕರಿಸಿರುವುದು ಸಂತಸದ ವಿಚಾರವಾಗಿದೆ. ಈ ನಿರ್ಧಾರದಿಂದ ತುಳುವರ ಬಹುಕಾಲದ ಆಶಯಕ್ಕೆ ಮಾನ್ಯತೆ ದೊರೆತಿದ್ದು, ಭಾಷೆಯ ಬೆಳವಣಿಗೆಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ರಾಜಕೇಸರಿ ಸೇವಾ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಲಾಲ್ ಹೇಳಿದರು.

ಸಮಾಜ ಸೇವೆಯ ಭಾಗವಾಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸಂಪೂರ್ಣ ನವೀಕರಿಸಿ ನೀಡುವ ಕಾರ್ಯವನ್ನು ಕೈಗೊಂಡಿರುವುದಾಗಿ ತಿಳಿಸಿದ ಅವರು, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ತುಳು ಭಾಷೆ ಇನ್ನಷ್ಟು ಬೆಳೆಯಬೇಕು, ಮುಂದಿನ ಪೀಳಿಗೆಗೂ ತುಳು ಭಾಷೆ ಹಾಗೂ ಸಂಸ್ಕೃತಿಯ ಅರಿವು ಮೂಡಬೇಕು. ತುಳು ಭಾಷೆಯ ಅಭಿವೃದ್ಧಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ ಲೋಕೇಶ್ ಕುಲಾಲ್, ತುಳು ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

SHARE
Loading spinner

One thought on “ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಸಂತಸ ವ್ಯಕ್ತಪಡಿಸಿದ ಲೋಕೇಶ್ ಕುಲಾಲ್

Leave a Reply

Your email address will not be published. Required fields are marked *

error: Content is protected !!