ಮಾದಕ ದ್ರವ್ಯ ಮಾರಾಟ ಜಾಲದ ಪತ್ತೆ ಹಾಗೂ ಆರೋಪಿಯ ಬಂಧನ

ಮಂಗಳೂರು: ನಗರದಲ್ಲಿ ಮಾದಕ ದ್ರವ್ಯ ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಸೆಪ್ಟೆಂಬರ್ 23ರಂದು ಸಂಜೆ ವಿಶ್ವಾಸಾರ್ಹ ಮೂಲಗಳಿಂದ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಅರ್ಕುಳ ಜಂಕ್ಷನ್ ಬಳಿಯ ಯಶಸ್ವಿ ಹಾಲ್ ಎದುರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.ಬಂಧಿತನನ್ನು ಬಂಟ್ವಾಳ ತಾಲೂಕಿನ ಮೇರಾಮಜಲು ಗ್ರಾಮದ 36 ವರ್ಷದ ಸುಭಾಷ್ ಎಂದು ಗುರುತಿಸಲಾಗಿದೆ.

ಆರೋಪಿಯ ಬಳಿಯಿಂದ ಸುಮಾರು ಒಂದು ಲಕ್ಷದ 15 ಸಾವಿರ ರೂಪಾಯಿ ಮೌಲ್ಯದ 23.20 ಗ್ರಾಂ ಎಂಡಿಎಂಎ ಮಾದಕ ವಸ್ತು, ಎರಡು ಮೊಬೈಲ್ ಫೋನ್‌ಗಳು ಹಾಗೂ ತೂಕ ಮಾಪನ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬಳಿಕ ಆರೋಪಿಯನ್ನು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಮಾದಕ ದ್ರವ್ಯ ಜಾಲದ ಹಿಂದೆ ಇರುವ ವ್ಯಕ್ತಿಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಈ ಹಿಂದೆಯೂ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಮಾದಕ ದ್ರವ್ಯ ಮಾರಾಟ ಜಾಲದ ಸಂಪೂರ್ಣ ಹಿನ್ನೆಲೆ ಹಾಗೂ ಇತರ ಆರೋಪಿಗಳ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!