ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ.11ರಿಂದ ಅ.21.ವರೆಗೆ ಜರುಗುವ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವದಲ್ಲಿ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರು ಪ್ರತಿಷ್ಠಾಪನೆಗೊಳ್ಳಲಿರುವ ದರ್ಬಾರ್ ಮಂಟಪ ರಚನೆಗೆ ವೈದಿಕ ವಿಧಿವಿಧಾನಗಳೊಂದಿಗೆ ಮುಹೂರ್ತ ನೆರವೇರಿತು.

ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿ ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ರಾಧಾಕೃಷ್ಣ ಉರ್ವ, ಪಿ.ಕೆ.ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಉದ್ಯಮಿ ಪ್ರವೀಣ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಕೋಶಾಧಿಕಾರಿ ಯೋಗೀಶ್ ಕೊಟ್ಯಾನ್, ಮೂಲ್ಕಿ ಸುವರ್ಣ ಆಟ್ಸ್‌ನ ಚಂದ್ರಶೇಖರ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.


