ಜಾನಪದ ಪರಿಷತ್ತು ರಾಜ್ಯಾಧ್ಯಕ್ಷರಿಂದ ಮಂಗಳೂರಿನ ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಗೆ ಭೇಟಿ……!

ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಇದರ ರಾಜ್ಯಾಧ್ಯಕ್ಷ ಪ್ರೊ. ಹಿ.ಶಿ. ಬೋರಲಿಂಗಯ್ಯ ಅವರು ಕಾರ್ಯನಿಮಿತ್ತ ಕಾಸರಗೋಡು ಹಾಗೂ ಮಂಜೇಶ್ವರಕ್ಕೆ ಭೇಟಿ ನೀಡಿದ ಬಳಿಕ ಗುರುವಾರ ಬೆಳಗ್ಗೆ ಮಂಗಳೂರಿನ ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳೊಂದಿಗೆ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಕುಟುಂಬ ಸಮೇತರಾಗಿ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ ಹಾಗೂ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ಜಿಲ್ಲಾ ಉಪಾಧ್ಯಕ್ಷರಾದ ಟಿಪೇಶ್ ಎಸ್ ಅಮೀನ್ ಅದ್ಯಪಾಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

One thought on “ಜಾನಪದ ಪರಿಷತ್ತು ರಾಜ್ಯಾಧ್ಯಕ್ಷರಿಂದ ಮಂಗಳೂರಿನ ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಗೆ ಭೇಟಿ……!”

Leave a Reply

Your email address will not be published. Required fields are marked *

error: Content is protected !!