ಮಂಗಳೂರು MRPL ಪ್ರದೇಶದಲ್ಲಿ ಭಾರೀ ಸ್ಫೋಟ.ಸುತ್ತ ಮುತ್ತ ಪ್ರದೇಶದಲ್ಲಿ ಅಧುರಿದ ಭೂಮಿ

ಮಂಗಳೂರು: ನಗರದ ಹೊರವಲಯದ MRPL ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಹಲವು ಮನೆಗಳು ಹಾಗೂ ಕಟ್ಟಡಗಳು ಕಂಪಿಸಿದ ಘಟನೆ ನಡೆದಿದೆ.

ಸ್ಫೋಟದ ಭಾರೀ ಶಬ್ದಕ್ಕೆ ಸ್ಥಳೀಯರು ಆತಂಕಗೊಂಡಿದ್ದು, ಹಲವು ಮನೆಗಳ ಬಾಗಿಲು, ಕಿಟಕಿಗಳು ಹಾಗೂ ಗಾಜುಗಳು ಹಾನಿಗೊಳಗಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೆಲವು ಕಟ್ಟಡಗಳ ಗೋಡೆಗಳಿಗೂ ಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಜಪೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸ್ಫೋಟದ ಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ.

ಸ್ಫೋಟ ಸಂಭವಿಸಿದ ಪ್ರದೇಶದ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ದೂರದ ಪ್ರದೇಶಗಳಿಂದಲೂ ಹೊಗೆ ಕಾಣಿಸಿಕೊಂಡಿದೆ. ಘಟನೆಯ ನಿಖರ ಕಾರಣ ಹಾಗೂ ಸ್ಫೋಟದ ತೀವ್ರತೆ ಕುರಿತು ಇನ್ನಷ್ಟೇ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.

ಘಟನೆಯ ಬಳಿಕ ಸ್ಥಳೀಯರು ಆತಂಕದಿಂದ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದು, ಅಧಿಕಾರಿಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!