ಸಾನಿಧ್ಯ ಸಂಸ್ಥೆಯಲ್ಲಿ ಅ.2ರಂದು ಗಾಂಧಿ ಜಯಂತಿ ಹಾಗೂ ಪೋಷಕರ–ಶಿಕ್ಷಕರ ಸಭೆ

ಮಂಗಳೂರು: ಶಕ್ತಿನಗರದ ಸಾನಿಧ್ಯ ಸಮೂಹ ಸಂಸ್ಥೆಗಳ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ಪೋಷಕರ–ಶಿಕ್ಷಕರ ಸಭೆಯನ್ನು ಅ.2ರಂದು ಬೆಳಗ್ಗೆ 11 ಗಂಟೆಗೆ ಸಾನಿಧ್ಯ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದೆ.

ಶ್ರೀ ಗಣೇಶ್ ಸೇವಾ ಟ್ರಸ್ಟ್ ಫಾರ್ ಎಕ್ಸೆಪ್ಷನಲ್ ಪರ್ಸನ್ಸ್‌ನ ಸೇವಾ ಯೋಜನೆಗಳ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಸಾನಿಧ್ಯ ಸಂಸ್ಥೆಗಳ ಟ್ರಸ್ಟಿಗಳು, ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ ಹಾಗೂ ವಿಶೇಷ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಕದ್ರಿಯ ನ್ಯೂರೋನೋವಾ ಫಿಸಿಕಲ್ ರಿಹ್ಯಾಬಿಲಿಟೇಶನ್ ಸೆಂಟರ್‌ನ ಸಂಸ್ಥಾಪಕಿ ಡಾ. ವಿನಾಂತಿ ರೈ (PT), BPT, MPT (ಪೀಡಿಯಾಟ್ರಿಕ್ಸ್) ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ .

SHARE
Loading spinner

Leave a Reply

Your email address will not be published. Required fields are marked *

error: Content is protected !!