ಮಂಗಳೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ತನಿಖೆ ಆರಂಭಿಸಿದೆ.

ಪೊಲೀಸ್ ಮಹಾನಿರೀಕ್ಷಕ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ಎಸ್ಐಟಿ ತಂಡದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು, ಹಳೆಯ ಡಿಸಿ ಕಚೇರಿಯಲ್ಲಿ ತನಿಖಾ ಕಚೇರಿಯನ್ನು ಪ್ರಾರಂಭಿಸಿದ್ದಾರೆ.
ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್ ಹಾಗೂ ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಸೇರಿದಂತೆ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ.

ಇಂದಿನಿಂದ ಸೌಜನ್ಯ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲು ಎಸ್ಐಟಿ ತಂಡ ಮುಂದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಲಭ್ಯವಿರುವ ಮಾಹಿತಿಗಳನ್ನು ಪರಿಶೀಲಿಸಿ ತನಿಖೆಯನ್ನು ಮುಂದುವರಿಸಲಾಗುತ್ತದೆ.

