ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ ಸಂಭವಿಸಿದ ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಕಟ್ಟಡಗಳಿಗೆ ಹಾನಿಯಾಗಿದ್ದು, ಪೆಜಾರ್‌ನ ಸಂತ ಜೋಸೆಫ್ ಚರ್ಚ್‌ನ ಛಾವಣಿ ಸೇರಿದಂತೆ ಕಟ್ಟಡದ ವಿವಿಧ ಭಾಗಗಳು ಹಾನಿಗೊಳಗಾಗಿವೆ.

ಹಾನಿಗೊಳಗಾದ ಪ್ರದೇಶಗಳಿಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಸ್ಫೋಟದಿಂದ ಉಂಟಾಗಿರುವ ಹಾನಿಯ ಕುರಿತು ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಫೋಟದಿಂದ ಹಾನಿಗೊಳಗಾದ ಕಟ್ಟಡಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

