ಕದ್ರಿ ಗ್ರೌಂಡ್‌ನಿಂದ ಸಿಟಿ ಆಸ್ಪತ್ರೆವರೆಗೆ ₹50 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನ ಕದ್ರಿ ಗ್ರೌಂಡ್ ನಿಂದ ಸಿಟಿ ಹಾಸ್ಪಿಟಲ್, ಕದ್ರಿ ಕೈಬಟ್ಟಲ್ ಕೋರಲ್ ಅಪಾರ್ಟ್‌ ಮೆಂಟ್ ಬಳಿ 50ಲಕ್ಷ ರೂ. ವಿಶೇಷ ಅನುದಾನದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು.

ನಂತರ ಮಾತನಾಡಿದ ಶಾಸಕರು, ಪ್ರತೀ ಮಳೆಗಾಲದಲ್ಲಿ ಕದ್ರಿ ಮೈದಾನದಿಂದ ಸಿಟಿ ಆಸ್ಪತ್ರೆವರೆಗೆ ಮಣ್ಣು ಮಿಶ್ರಿತ ನೀರು ಹರಿದು ಬಂದು ಇಲ್ಲಿನ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳೀಯ ನಿಕಟಪೂರ್ವ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿಯವರು ವಿಶೇಷ ಪ್ರಯತ್ನ ಪಟ್ಟಿದ್ದಾರೆ. ಕಳೆದ ಮೂರೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರದಿಂದ ಯಾವುದೇ ವಿಶೇಷ ಅನುದಾನಗಳು ಬಂದಿಲ್ಲವಾದರೂ ಲಭ್ಯ ಅಲ್ಪ ಅನುದಾನದಲ್ಲೇ ನಿಮ್ಮೆಲ್ಲರ ಬೇಡಿಕೆಯಂತೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ಪರಿಸರದ ನಿವಾಸಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!