ರಸ್ತೆ ಅತಿಕ್ರಮಣದ ಬಗ್ಗೆ ಸಾರ್ವಜನಿಕರ ದೂರು ಹಿನ್ನಲೆ ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆಗೆ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಭೇಟಿ

ಮಂಗಳೂರು: ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆಯಲ್ಲಿ ರಸ್ತೆ ಅತಿಕ್ರಮಣ ಸಂಬಂಧಿಸಿದಂತೆ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಳಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದರು, ಮೇಲ್ನೋಟಕ್ಕೆ ಅತಿಕ್ರಮಾನವಾಗಿರುವುದು ಕಂಡು ಬಂದಿದ್ದು ಏಕ ನಿವೇಶನ ವಿನ್ಯಾಸವನ್ನು ರದ್ದು ಮಾಡಿ ಪರೀಸ್ಕೃತ ವಿನ್ಯಾಸ ಅನುಮೋದನೆಯನ್ನು ಪಡೆಯುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!