ಕನ್ನಡ ಭವನದ ರೂವಾರಿಗಳಿಗೆ ‘ಚೈತನ್ಯ ಶ್ರೀ’ ರಾಷ್ಟ್ರೀಯ ಪ್ರಶಸ್ತಿ

ಮಂಗಳೂರು, ಅ.5: ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಸಲ್ಲಿಸಿದ ಗಣನೀಯ ಸೇವೆಗಾಗಿ ಕನ್ನಡ ಭವನದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ದಂಪತಿಗೆ ‘ಚೈತನ್ಯ ಶ್ರೀ’ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಡಿಪು ಭಾರತಿ ವಿದ್ಯಾ ಸಂಸ್ಥೆಯಲ್ಲಿ ಆ.16ರಂದು ಕಥಾಬಿಂದು ಸಾಹಿತ್ಯ ವೇದಿಕೆ ಹಾಗೂ ಕಥಾಬಿಂದು ಪ್ರಕಾಶನದ ನೇತೃತ್ವದಲ್ಲಿ ಕಥಾಬಿಂದು ಪಿ.ವಿ. ಪ್ರದೀಪ್ ಕುಮಾರ್ ಅವರ ಸಾರಥ್ಯದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ಸಾಹಿತ್ಯ–ಸಾಂಸ್ಕೃತಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಧರ್ಮದರ್ಶಿ ಹಾಗೂ ಮಾಜಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನಃರೂರು ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನದಲ್ಲಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ದಂಪತಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಥಾಬಿಂದು ಪಿ.ವಿ. ಪ್ರದೀಪ್ ಕುಮಾರ್, ಡಾ. ಕೊಲಚಪ್ಪೆ ಗೋವಿಂದ ಭಟ್, ಹಿರಿಯ ಸಾಹಿತಿ ಕೆ.ವಿ. ಲಕ್ಷ್ಮಣಮೂರ್ತಿ, ಸುಬ್ರಹ್ಮಣ್ಯ ಭಟ್ ಕೊಡಕ್ಕಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!