ಬಂಟ್ವಾಳ: ತಾಲೂಕಿನ ತಲಪಾಡಿ ಎಂಬಲ್ಲಿ ಸೋಮವಾರ ಲಾರಿ, ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಲಾರಿಯೊಂದು ಸರ್ವಿಸ್ ರಸ್ತೆಯಿಂದ ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿ ಮಂಗಳೂರು ಕಡೆಗೆ ತಿರುಗುತ್ತಿದ್ದ ವೇಳೆ, ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್ಗೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ ಪರಿಣಾಮ, ಬಸ್ನ ಹಿಂಬದಿಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಬಸ್ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಉಳಿದಂತೆ ಬಸ್ ಹಾಗೂ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.
ಅಪಘಾತದಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಘಟನೆಯ ಕುರಿತು ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.



Top notch service and the games are super addictive. I finally found a platform that actually works without lagging. bd777jili is the way to go.