ಪುತ್ತೂರು: ಕೊಲೆ ಪ್ರಕರಣದಲ್ಲಿ ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ವೇಳೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ನ್ಯಾಯಾಲಯವು 2 ವರ್ಷಗಳ ಕಾರಾವಾಸ ಶಿಕ್ಷೆ ವಿಧಿಸಿದೆ.ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್., ಶಾಹಿರ್ ಅಲಿಯಾಸ್ ಶಾಕಿರ್ (41) ಶಿಕ್ಷೆಗೆ ಗುರಿಯಾದ ಆರೋಪಿ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 120/2008, ಕಲಂ 450, 302, 201 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತನನ್ನು 05-04-2016ರಂದು ಮಂಗಳೂರು ಕಾರಾಗೃಹದಿಂದ ವಿಚಾರಣೆಗಾಗಿ ಪುತ್ತೂರಿನ ಮಾನ್ಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕರೆತರಲಾಗಿತ್ತು.
ಈ ವೇಳೆ ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಲು ಆರೋಪಿ ಪ್ರಯತ್ನಿಸಿದ್ದ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2016, ಕಲಂ 224 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಪುತ್ತೂರು ನಗರ ಠಾಣೆಯ ಉಪನಿರೀಕ್ಷಕರಾದ ಖಾದರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಎಸಿಜೆಎಂ ಪ್ರಕೃತಿ ಕಲ್ಯಾಣಪುರ್ ಅವರು, 05-10-2026ರಂದು ಆರೋಪಿಗೆ 2 ವರ್ಷಗಳ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.ಪ್ರಕರಣದಲ್ಲಿ ಕಾನೂನು ಅಭಿಯೋಜಕರಾದ ಮನೋಜ್ ಕುಮಾರ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.


Finally found a platform that doesn’t lag during peak hours. The registration process was a breeze and I was able to start playing in minutes. Give winevo a try!