ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಮಾಸಿಕ ಸಭೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಮಾಸಿಕ ಸಭೆಯು ಇಂದು (ಅ.06) ಮುಡಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮಂಗಳೂರು ನಗರದ ಅಭಿವೃದ್ಧಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿನ ವಿವಿಧ ಯೋಜನೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಮುಡಾ ಆಯುಕ್ತರಾದ ಶ್ರೀ ಮೊಹಮ್ಮದ್ ನಝೀರ್, ಪ್ರಾಧಿಕಾರದ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!