ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ ಸ್ಥಾಪನೆ: ಅ.11ರಂದು ಬೈಂದೂರಿನಲ್ಲಿ ಉದ್ಘಾಟನೆ …. !

ಬೈಂದೂರು: ಅಖಿಲ ಕರ್ನಾಟಕ ಕೋಟೆಗಾರ ಸಂಘದ ನೇತೃತ್ವದಲ್ಲಿ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಸ್ಥಾಪನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.11ರಂದು ಬೈಂದೂರಿನ ಯಡ್ತರೆಯ ಜೆಎನ್‌ಆರ್ ಕಲಾ ಮಂದಿರದಲ್ಲಿ ನಡೆಯಲಿದೆ.


ಕೋಟೆಗಾರ್ ರಾಮಕ್ಷತ್ರಿಯ ಸಮಾಜದ ಸದಸ್ಯರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ, ಸಮುದಾಯದ ಬಲವರ್ಧನೆ, ಸಂಘಟನೆ ಹಾಗೂ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟವನ್ನು ಸ್ಥಾಪಿಸಲಾಗುತ್ತಿದೆ.

ಅ.11ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಜೆ. ಕೃಷ್ಣ ಪಾಲೇಮಾರ್ ಉದ್ಘಾಟಿಸಲಿದ್ದಾರೆ. ಅಖಿಲ ಕರ್ನಾಟಕ ಕೋಟೆಗಾರ ಸಂಘದ ಅಧ್ಯಕ್ಷ ನಾಡೋಜ ಡಾ. ಕೂಡ್ಲು ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಅಧ್ಯಕ್ಷರಾಗಿ ನಾಮಾಂಕಿತರಾಗಿರುವ ಬಳ್ಳಾರಿಯ ಅಶ್ವಿನಿ ಎಂಟರ್‌ಪ್ರೈಸಸ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಪದ್ಮನಾಭ ಕೊತ್ವಾಲ್ ಘನ ಉಪಸ್ಥಿತರಿರುವರು.

ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಹಾಗೂ ಕೋಟೆಗಾರ್ ವಿದ್ಯಾವರ್ಧಕ ಸಂಘ, ಹೊಸನಗರದ ಅಧ್ಯಕ್ಷ ಶ್ರೀ ಶಶಿಧರ್ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉತ್ತರ ಕನ್ನಡ ರಾಮಕ್ಷತ್ರಿಯ ಸಂಸ್ಥೆಗಳ ಸೀಮಾ ಪರಿಷತ್ ಅಧ್ಯಕ್ಷ ಎಸ್.ಕೆ. ನಾಯಕ್, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ನರಸಿಂಹ ನಾಯಕ್, ಹೊನ್ನಾವರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯಕ್ ಹಾಗೂ ರಾಮಕ್ಷತ್ರಿಯ ಯುವ ಸೇವಾ ಸಂಘ, ಬೆಂಗಳೂರು ಅಧ್ಯಕ್ಷ ಗಣೇಶ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಕಾರ್ಯಾಧ್ಯಕ್ಷ ಹೆಬ್ರಿ ಶ್ರೀನಿವಾಸ ಸೇರ್ವೆಗಾರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಬೈಂದೂರು ತಾಲೂಕಿನ ಶ್ರೀ ಸೀತಾ ರಾಮಚಂದ್ರ ದೇವಾಲಯದಲ್ಲಿ ಭಜನಾ ಮಾಧುರ್ಯ ಹಾಗೂ ದೀಪ ಪ್ರಜ್ವಲನೆ ನಡೆಯಲಿದೆ. ಬಳಿಕ ಜೆಎನ್‌ಆರ್ ಕಲಾ ಮಂದಿರದಲ್ಲಿ ಭಜನಾ ಮಾಧುರ್ಯ, ಭಾರತೀಯ ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಕೋಟೆಗಾರ್ ವಿದ್ಯಾವರ್ಧಕ ಸಂಘ, ಹೊಸನಗರದ ಪ್ರಧಾನ ಕಾರ್ಯದರ್ಶಿ ಸುರೇಶ್ ಎಚ್.ಆರ್. ಪ್ರಧಾನ ಭಾಷಣ ಮಾಡಲಿದ್ದು, ಪ್ರೊ. ಆನಂದ್ ನಾಯಕ್ ಶುಭಾಶಂಸನೆ ನೆರವೇರಿಸಲಿದ್ದಾರೆ. ಹೆಬ್ರಿ ಶ್ರೀನಿವಾಸ್ ಸೇರ್ವೆಗಾರ್ ಸ್ವಾಗತ ಭಾಷಣ ಹಾಗೂ ಡಾ. ರಾಜೇಂದ್ರ ಕೆ. ಪ್ರಾಸ್ತಾವಿಕ ನುಡಿ ಸಲ್ಲಿಸಲಿದ್ದಾರೆ. ದೀಪ ಪ್ರಜ್ವಲನೆ ಮತ್ತು ಶಾಲೆಗಳಿಗೆ ಸಸಿಗಳ ವಿತರಣೆ ಮೂಲಕ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನೆ ನಡೆಯಲಿದೆ. ಬಳಿಕ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸ್ವೀಕಾರ ಭಾಷಣ ನಡೆಯಲಿದೆ.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಗಣ್ಯರು ಹಾಗೂ ಪ್ರತಿಭಾವಂತರಿಗೆ ಸನ್ಮಾನ, ಸಾಧಕರ ಗುರುತಿಸುವಿಕೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ. ಮುಖ್ಯ ಅತಿಥಿಗಳಾದ ಶಶಿಧರ್ ನಾಯಕ್ ಹಾಗೂ ಎಸ್.ಕೆ. ನಾಯಕ್ ಮಾತನಾಡಲಿದ್ದು, ನಾಡೋಜ ಡಾ. ಕೂಡ್ಲು ಕೃಷ್ಣಪ್ರಸಾದ್ ಅಧ್ಯಕ್ಷೀಯ ನುಡಿ ಸಲ್ಲಿಸಲಿದ್ದಾರೆ. ಡಾ. ಬಾಲಕೃಷ್ಣ ಎಸ್. ಮದ್ದೋಡಿ ವಂದನಾರ್ಪಣೆ ಮಾಡಲಿದ್ದಾರೆ.
ಕೋಟೆಗಾರ್ ರಾಮಕ್ಷತ್ರಿಯ ಸಮಾಜದ ಉಡುಪಿ ಜಿಲ್ಲೆಯ ಎಲ್ಲ ಬಂಧು-ಭಗಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,ಸಮಾಜದ ಎಲ್ಲರನ್ನೂ ಒಗ್ಗೂಡಿಸಿ , ಕ್ರಿಯಾತ್ಮಕವಾಗಿ ಮುನ್ನಡೆಸುವ ಈ ಮಹತ್ವದ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆತೆ ಸಂಘಟಕರು ಕಳಕಳಿಯ ಮನವಿ ಮಾಡಿದ್ದಾರೆ.

SHARE
Loading spinner

3 thoughts on “ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ ಸ್ಥಾಪನೆ: ಅ.11ರಂದು ಬೈಂದೂರಿನಲ್ಲಿ ಉದ್ಘಾಟನೆ …. !”

Leave a Reply

Your email address will not be published. Required fields are marked *

error: Content is protected !!