ಮಂಗಳೂರಿನಲ್ಲಿ ಅ.11ರಂದು ಭಾರತ್ ಪೆಟ್ರೋಲಿಯಂ ಆಟೋಕ್ರಾಸ್

ಮಂಗಳೂರು: ಮಂಗಳೂರಿನ ಗೋಲ್ಫಿಂಚ್ ಸಿಟಿ, ಕುಳೂರಿನಲ್ಲಿ ಅ.11ರಂದು ಬೆಳಗ್ಗೆ 9 ಗಂಟೆಗೆ ‘ಭಾರತ್ ಪೆಟ್ರೋಲಿಯಂ ಆಟೋಕ್ರಾಸ್–2026’ ಮೋಟಾರ್ ಸ್ಪೋರ್ಟ್ಸ್ ಸ್ಪರ್ಧೆ ನಡೆಯಲಿದೆ.


ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾ (FMSCI) ಸಹಯೋಗದಲ್ಲಿ ಮಂಗಳೂರು ಮೋಟಾರ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಯೋಜಿಸುತ್ತಿರುವ ಈ ಸ್ಪರ್ಧೆಯಲ್ಲಿ 4W ಡರ್ಟ್ ಆಟೋಕ್ರಾಸ್ ವಿಭಾಗದ ರೋಚಕ ಕಾರು ರೇಸ್ ನಡೆಯಲಿದೆ.
‘ದಿ ಅಲ್ಟಿಮೇಟ್ ಮೋಟಾರ್ ಸ್ಪೋರ್ಟ್ಸ್ ಫೆಸ್ಟಿವಲ್’ ಎಂಬ ಪರಿಕಲ್ಪನೆಯಡಿ ನಡೆಯಲಿರುವ ಕಾರ್ಯಕ್ರಮಕ್ಕೆ ಭಾರತ್ ಪೆಟ್ರೋಲಿಯಂ ಮೇಕ್ ಲೂಬ್ರಿಕಂಟ್ಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳು ಸಹಕಾರ ನೀಡುತ್ತಿವೆ. ಮೋಟಾರ್ ಸ್ಪೋರ್ಟ್ಸ್ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ಪರ್ಧೆಯನ್ನು ವೀಕ್ಷಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!