ಎಸ್‌ಐಆರ್ ವಿರೋಧಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಬೃಹತ್ ಪ್ರತಿಭಟನೆ

ಎಸ್‌ಐಆರ್ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಒತ್ತಾಯಿಸಿ, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡುವಂತೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಇದೇ ವೇಳೆ ಮಾತನಾಡಿದ ಹಿರಿಯ ಚಿಂತಕ, ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಶಿವಸುಂದರ್, ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಎಲ್ಲ ಅಧಿಕಾರವನ್ನು ಬಳಸಿಕೊಂಡು ಈ ದೇಶದ 140 ಕೋಟಿ ಜನರ ಪ್ರಜಾತಂತ್ರದ ಭವಿಷ್ಯದ ಮೇಲೆ ಆಟವಾಡುತ್ತಿದ್ದಾರೆ ಎಂದರು.


ಭಾರತದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಭಾರತ ಸರಕಾರದ ಮುಖ್ಯ ಚುನಾವಣಾ ಆಯುಕ್ತರಾಗಿ ಮಾತ್ರ ಅಲ್ಲ. ಅವರು ಬಿಜೆಪಿಯ ಚುನಾವಣಾ ಆಯುಕ್ತರಾಗಿ ಕೆಲಸ ಮಾಡುತ್ತಿದ್ದಾರೆ. ಒಂದು ಪಕ್ಷದ ಪರವಾಗಿ , ಸಂವಿಧಾನಕ್ಕೆ ವಿರುದ್ಧವಾಗಿ, ದೇಶದ್ರೋಹಿ ಆಗಿ ಕೆಲಸ ಮಾಡುತ್ತಿದ್ದಾರೆ. ಈ ದೇಶದ ಅತೀ ದೊಡ್ಡ ಗದ್ದಾರ್ ಆಗಿ ಯಾರಾದರೂ ಇದ್ದರೆ ಅವರು ಜ್ಞಾನೇಶ್ ಕುಮಾರ್ ಎಂದು ಹರಿಹಾಯ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!