ಮಂಗಳೂರು: ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಕಚೇರಿ ಅಧೀಕ್ಷಕರಾದ ಕಳಿಯೂರು ದೇವಸ್ಯ ಗುತ್ತು ಸುಮಿತ ವಿಜಯ್ ಶೆಟ್ಟಿ ಅವರು ಪಿಎಚ್.ಡಿ ಪದವಿಗೆ ಭಾಜನರಾಗಿದ್ದಾರೆ.

ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯವು ಇವರ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ. “ಧಾರ್ಮಿಕ ಮತ್ತು ಸಾಂಸ್ಕೃತಿಕ ಪುನರುತ್ಥಾನದಲ್ಲಿ ಕಾಸರಗೋಡು ಜಿಲ್ಲೆಯ ಬಂಟ ಮನೆತನಗಳ ಕೊಡುಗೆ” ಎಂಬ ವಿಷಯದ ಕುರಿತು ಅವರು ಸಂಶೋಧನೆ ನಡೆಸಿದ್ದರು. ಶ್ರೀನಿವಾಸ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಂಶೋಧನಾ ಮಾರ್ಗದರ್ಶಕರಾದ ಡಾ. ರಾಜೇಶ್ ಬೆಜ್ಜಂಗಳ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ಪೂರ್ಣಗೊಳಿಸಿದ್ದಾರೆ.

ಸುಮಿತ ವಿಜಯ್ ಶೆಟ್ಟಿ ಅವರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ವಿಜಯಕುಮಾರ್ ಶೆಟ್ಟಿ ಅವರ ಪತ್ನಿ. ಇವರು ಮಂಗಲ್ಪಾಡಿ ಹಿತ್ತಿಲು ಬಾರಿಯ ಕೊರಗಪ್ಪ ಚೌಟ ಕುಂಬಡಾಜೆ ಹಾಗೂ ಕಳಿಯೂರು ದೇವಸ್ಯ ಗುತ್ತುವಿನ ದಿವಂಗತ ಶೀಲಾ ಚೌಟ ದಂಪತಿಯ ಪುತ್ರಿ.
ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಾಸರಗೋಡು ಜಿಲ್ಲೆಯ ಬಂಟ ಮನೆತನಗಳ ಕೊಡುಗೆಯನ್ನು ಅಧ್ಯಯನ ಮಾಡಿದ ಇವರ ಸಾಧನೆಗೆ ಕುಟುಂಬದವರು, ಬಂಧುಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.


