ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಕವಿಗೋಷ್ಠಿ; ಡಾ. ಧನಂಜಯ ಕುಂಬ್ಳೆ ಅಧ್ಯಕ್ಷತೆ

ಮಂಗಳೂರು: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 12ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು ದಸರಾ ಕವಿಗೋಷ್ಠಿ–2026 ನಡೆಯಲಿದೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಿ, ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ ವಹಿಸಲಿದ್ದಾರೆ.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಜೈರಾಜ್ ಎಚ್ ಸೋಮಸುಂದರಂ ಉಪಸ್ಥಿತರಿರುವರು. ಕಾಸರಗೋಡಿನ ಪೆರಿಯ ಕೇಂದ್ರೀಯ ವಿವಿಯ ಪ್ರಾಧ್ಯಾಪಕ ಚೇತನ್ ಮುಂಡಾಜೆ ಆಶಯ ನುಡಿ ನೀಡಲಿದ್ದಾರೆ.

ಕವಿಗೋಷ್ಠಿಯಲ್ಲಿ ಕವಿಗಳಾದ ಜ್ಯೋತಿ ಗುರುಪ್ರಸಾದ್, ಸದಾಶಿವ ಸೊರಟೂರು, ರಾಧಾಕೃಷ್ಣ ಉಳಿಯತ್ತಡ್ಕ, ದೀವಿತ್ ಎಸ್ ಕೆ ಪೆರಾಡಿ, ಜ್ಯೋತಿ ಚೇಳೈರ್, ರಾಧೇಶ್ ತೋಳ್ಪಾಡಿ, ಸುಲೋಚನ ಪಚ್ಚಿನಡ್ಕ, ಚೇತನ್ ವರ್ಕಾಡಿ, ಲತೀಶ್ ಎಂ.ಸಂಕೊಳಿಗೆ, ದಿವಾಕರ ಕೊಕ್ಕಡ, ವಿಶ್ವನಾಥ ಕುಲಾಲ್ ಮಿತ್ತೂರು ಭಾಗವಹಿಸಲಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!