ಮಂಗಳೂರಲ್ಲಿ ಬೃಹತ್ ಪ್ರತಿರೋಧ ರ್ಯಾಲಿ ಮತ್ತು ಪ್ರತಿಭಟನೆ

ದೆಹಲಿಯಲ್ಲಿ ಯುವಜನರ ಬಂಧನ ಹಾಗೂ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಆರೋಪವನ್ನು ಖಂಡಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

‘ಪ್ರಜಾಪ್ರಭುತ್ವ ಉಳಿಸಿ ಆಂದೋಲನ’ದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ತಮ್ಮ ವಿರೋಧ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಜೆನ್ ಝೀ ಯುವಕರ ಬಂಧನವನ್ನು ಖಂಡಿಸಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ನಾಗರಿಕರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿದರು. ಸಂಘಪರಿವಾರದ ವಿರುದ್ಧವೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಪೂಜಾರಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಎಸ್‌ಡಿಪಿಐ ಮುಖಂಡರಾದ ರಿಯಾಝ್ ಹಾಗೂ ಅನ್ವರ್ ಸಾದಾತ್ ಬಜತ್ತೂರು ಭಾಗವಹಿಸಿದರು.

ವಿವಿಧ ಪಕ್ಷಗಳು ಮತ್ತು ಸಂಘಟನೆಗಳ ಪ್ರತಿನಿಧಿಗಳು ಒಗ್ಗೂಡಿ ನಡೆಸಿದ ಈ ಪ್ರತಿಭಟನೆಯು ದೆಹಲಿಯ ಬೆಳವಣಿಗೆಗಳ ವಿರುದ್ಧದ ಪ್ರತಿರೋಧವಾಗಿ ಗಮನ ಸೆಳೆಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!