ಮಂಗಳೂರು: ವಾಮಂಜೂರು ಮಂಗಳಜ್ಯೋತಿ ಪ್ರದೇಶದ ಆದಿವಾಸಿ ಕೊರಗ ಸಮುದಾಯದ 33 ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ನಿವೇಶನಗಳನ್ನು ಶೀಘ್ರವಾಗಿ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪಾದಯಾತ್ರೆ ಹಾಗೂ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.

ವಾಮಂಜೂರಿನಿಂದ ಆರಂಭಗೊಂಡ ಪಾದಯಾತ್ರೆಯು ನಂತೂರು, ಪಂಪ್ವೆಲ್ ಮೂಲಕ ಪಡೀಲ್ವರೆಗೆ ಸಾಗಿತು. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ. ಕೃಷ್ಣಪ್ಪ ಕೊಂಚಾಡಿ ಅವರು ಹೋರಾಟಕ್ಕೆ ಚಾಲನೆ ನೀಡಿದರು.

ಸ್ವಾತಂತ್ರ್ಯ ಪೂರ್ವದಿಂದಲೂ ವಾಮಂಜೂರಿನ ಮಂಗಳಜ್ಯೋತಿ ಪ್ರದೇಶದಲ್ಲಿ ವಾಸಿಸುತ್ತಿರುವ ಕೊರಗ ಸಮುದಾಯದ ಕುಟುಂಬಗಳು ಹಕ್ಕುಪತ್ರ ಹಾಗೂ ನಿವೇಶನಗಳಿಗಾಗಿ ಕಾಯುತ್ತಿವೆ. ಈ ಕುರಿತು ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದರೂ, ಅರ್ಹ 33 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ನಿವೇಶನಗಳನ್ನು ವಿತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.

ಆದಿವಾಸಿ ಸಮುದಾಯದ ಭೂಮಿ ಮತ್ತು ವಸತಿ ಹಕ್ಕುಗಳನ್ನು ಖಚಿತಪಡಿಸಬೇಕು. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅರ್ಹ ಫಲಾನುಭವಿಗಳಿಗೆ ಕೂಡಲೇ ಹಕ್ಕುಪತ್ರ ಹಾಗೂ ನಿವೇಶನಗಳನ್ನು ವಿತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು .


This platform has a great variety of games and the bonuses are actually useful. I’ve had a great time exploring vn39bet6com lately.
I’ve tried a few platforms lately but this one really stands out. The interface is smooth and the payouts are surprisingly fast. Definitely worth checking out phjljl789
Reliable, fast, and honest. That is all I ask from a site and this one delivers perfectly. Give pkctt777 a try