ಕಾಪು: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಪಲ್ಟಿ; ಏಳು‌ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.


ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ರಕ್ಷಣೆ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಮತ್ತೊಂದು ದುರಂತ ತಪ್ಪಿದಂತಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!