ಮಂಗಳೂರು ದಸರಾಕ್ಕೆ ಸಿಎಂ ಭೇಟಿ: ಇಂದು ಸಂಜೆ ನಗರದಲ್ಲಿ ಸಂಚಾರ ನಿರ್ಬಂಧ

ದಿನಾಂಕ 15-10-2026 ರಂದು ಸಂಜೆ ರಾಜ್ಯದ ಮಾನ್ಯ ಮುಖ್ಯಮಂತ್ರಿಯವರು ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಗಣ್ಯರ ಭದ್ರತೆ ಹಾಗೂ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಅಂದು ಸಂಜೆ 4:00 ಗಂಟೆಯಿಂದ ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ.

ಆದ್ದರಿಂದ ಸಾರ್ವಜನಿಕರು ಕೆಳಕಂಡ ಸೂಚನೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವ ರಸ್ತೆಗಳು

👉🏻 ಕೆ.ಪಿ.ಟಿ. ವೃತ್ತದಿಂದ– ಕೆ.ಎಸ್.ಆರ್.ಟಿ.ಸಿ. – ಲಾಲ್‌ಬಾಗ್ ಮೂಲಕ ನಾರಾಯಣಗುರು ವೃತ್ತದವರೆಗೆ.

👉🏻 ನಾರಾಯಣಗುರು ವೃತ್ತದಿಂದ ಮಣ್ಣಗುಡ್ಡೆ – ದುರ್ಗಾಮಹಲ್ ಜಂಕ್ಷನ್ – ಕುದ್ರೋಳಿ ದೇವಸ್ಥಾನ – ಅಳಕೆ ಸೇತುವೆ – ನ್ಯೂ ಚಿತ್ರಾ ಜಂಕ್ಷನ್ ಕಡೆಗೆ ಸಾಗುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.

ಮೇಲ್ಕಂಡ ರಸ್ತೆಗಳಲ್ಲಿ ಸಂಚರಿಸುವ ವಾಹನ ಚಾಲಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಸೂಚನೆಗಳು

👉🏻 ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧಗಳು ಅಥವಾ ಬದಲಾವಣೆಗಳು ಇರಬಹುದಾಗಿದ್ದು, ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸುವುದು.

👉🏻 ಗಣ್ಯರು ಸಂಚರಿಸುವ ರಸ್ತೆಗಳ ಎರಡೂ ಬದಿಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು.

👉🏻 ಅನಗತ್ಯವಾಗಿ ವಾಹನ ದಟ್ಟಣೆ ಉಂಟಾಗದಂತೆ ಸಹಕರಿಸಬೇಕು ಹಾಗೂ ತುರ್ತು ಪ್ರಯಾಣಗಳಿಗೆ ಮುಂಚಿತವಾಗಿ ಯೋಜನೆ ರೂಪಿಸಿಕೊಳ್ಳುವುದು. (ತುರ್ತು ವಾಹನ ಹೊರತು ಪಡಿಸಿ).

👉🏻 ಸಂಜೆ 4-00 ಗಂಟೆಯಿಂದ ರಾತ್ರಿ 8-00 ಗಂಟೆಯ ವರೆಗೆ ನ್ಯೂ-ಚಿತ್ರಾ ಜಂಕ್ಷನ್ – ದುರ್ಗಾ ಮಹಲ್ ಜಂಕ್ಷನ್‌ವರೆಗೆ ಸಂಚರಿಸದೇ ಅದೇ ರೀತಿ ದುರ್ಗಾಮಹಲ್ ಜಂಕ್ಷನ್‌ನಿಂದ ನ್ಯೂಚಿತ್ರಾ ಜಂಕ್ಷನ್‌ವರೆಗೆ ಸಂಚರಿಸದೇ ಪರ್ಯಾಯ ಮಾರ್ಗವನ್ನು ಉಪಯೋಗಿಸುವುದು.

👉🏻 ದೇವಸ್ಥಾನಕ್ಕೆ ಬರುವ ಸಾರ್ವಜನಿಕರು ಮಣ್ಣಗುಡ್ಡೆ – ಗಾಂಧಿನಗರ ಅಡ್ಡ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದು. ಮೇಲ್ಕಂಡ ಅವಧಿಯಲ್ಲಿ ಕುದ್ರೋಳಿ ಮುಖ್ಯರಸ್ತೆಯಲ್ಲಿ ವಾಹನ ಸಂಚರಿಸಲು/ನಿಲುಗಡೆಗೆ ಸಾಧ್ಯವಾಗುವುದಿಲ್ಲ.

“ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತವಾಗಿರಿ”

ಪೊಲೀಸ್ ಆಯುಕ್ತರು
ಮಂಗಳೂರು ನಗರ

SHARE
Loading spinner

Leave a Reply

Your email address will not be published. Required fields are marked *

error: Content is protected !!